ಕೆ.ಜೆ.ಜಾರ್ಜ್ ವಿರುದ್ಧ ಹೋರಾಟ, ಬಿಜೆಪಿಯಲ್ಲೇ ಎರಡು ವಾದ! | Oneindia Kannada

  • 7 years ago
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆಗೆ ಹೋರಾಟ ನಡೆಸುವ ಕುರಿತು ಬಿಜೆಪಿ ಪಕ್ಷದಲ್ಲೇ ಎರಡು ವಾದ ಕೇಳಿ ಬರುತ್ತಿವೆ. ಆದ್ದರಿಂದ, ಸದನದಲ್ಲಿ ಮತ್ತು ಹೊರಗೆ ಹೋರಾಟ ನಡೆಸುವ ಕುರಿತು ಬಿಜೆಪಿ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ಹಸ್ತಾಂತರವಾಗಿದೆ. ಸಿಬಿಐ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲು ಮಾಡಿದೆ. ಆದ್ದರಿಂದ, ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಒಂದು ದಿನದ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿತ್ತು. ಆದರೆ, ಅದನ್ನು ಮುಂದೂಡಲಾಗಿತ್ತು. ಸದ್ಯ, ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಹೋರಾಟ ನಡೆಸಲು ಬಿಜೆಪಿ ನಿರ್ಧರಿಸಿತ್ತು. ಆದರೆ, ಆ ಕುರಿತು ಅಂತಿಮ ತೀರ್ಮಾನ ಕೈಗೊಂಡಿಲ್ಲ. ರಾಜ್ಯ ಬಿಜೆಪಿ ನಾಯಕರಲ್ಲಿಯೇ ಜಾರ್ಜ್ ವಿರುದ್ಧ ಹೋರಾಟ ನಡೆಸುವ ಕುರಿತು ಎರಡು ವಾದಗಳು ಕೇಳಿಬಂದಿವೆ.

there are 2 sides within BJP with one of the sides wanting to protest so that george is kicked out from his position and the other part is against protesting .