ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಟೀಮ್ ರೆಡಿ | Oneindia Kannada

  • 7 years ago
ಪ್ರವಾಸಿ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸೋಮವಾರ ಸಂಜೆ ಪ್ರಕಟಿಸಿದೆ. ನಿರೀಕ್ಷೆಯಂತೆ ಏಕದಿನ ಸರಣಿ ಆಡುವ ತಂಡದ ಜತೆಗೆ ಟಿ20ಐ ತಂಡಕ್ಕೂ ರೋಹಿತ್ ಶರ್ಮ ಅವರು ನಾಯಕರಾಗಿ ಆಯ್ಕೆಯಾಗಿದ್ದಾರೆ. ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಡಿಸೆಂಬರ್ 10ರಿಂದ ಏಕದಿನ ಸರಣಿ ಆರಂಭವಾಗಲಿದೆ. ಮೂರು ಟಿ20 ಪಂದ್ಯಗಳ ಸರಣಿ ಡಿಸೆಂಬರ್ 20ರಂದು ಕಟಕ್ ನಲ್ಲಿ ಆರಂಭವಾಗಲಿದೆ. ತಂಡ ಇಂತಿದೆ: ರೋಹಿತ್ ಶರ್ಮ(ನಾಯಕ), ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ದೀಪಕ್ ಹೂಡಾ, ಜಸ್ ಪ್ರೀತ್ ಬೂಮ್ರಾ, ಮೊಹಮ್ಮದ್ ಸಾಜ್, ಬಸಿಲ್ ಥಂಪಿ, ಜಯದೇವ್ ಉನದ್ಕತ್.
BCCI announces its squad for the t20 series against australia. Rohit sharma leads the side

Recommended