ಸಿದ್ದರಾಮಯ್ಯನವರ ನವ ಕರ್ನಾಟಕ ನಿರ್ಮಾಣ ಯಾತ್ರೆ ಉಡುಪಿಯಲ್ಲಿ | Oneindia Kannada

  • 7 years ago
CM Siddaramaiah is in Udupi today. He is inaugurating crores worth many development programs in Udupi district. He is Visiting Kapu, Brahmavara, Kundapar.


ಸಿದ್ದರಾಮಯ್ಯ ಅವರ ನವ ಕರ್ನಾಟಕ ನಿರ್ಮಾಣ ಯಾತ್ರೆ ಇಂದು ಉಡುಪಿ ಜಿಲ್ಲೆ ತಲುಪಿದೆ. ಜಿಲ್ಲೆಯಲ್ಲಿ ಮೂರು ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಜಿಲ್ಲೆಯ ಪ್ರಮುಖ ರಾಜಕೀಯ ಕ್ಷೇತ್ರಗಳಾದ ಕುಂದಾಪುರ, ಬ್ರಹ್ಮಾವರ, ಕಾಪು ನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಮೂರೂ ನಗರಗಳಲ್ಲಿ ಹಲವು ಫಲಾನುಭವಿಗಳಿಗೆ ಯೋಜನೆಗಳನ್ನು ಮುಖ್ಯಮಂತ್ರಿಗಳು ವಿತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರ ಜೊತೆಗೆ ಸ್ಥಳೀಯ ಶಾಸಕರು, ಪ್ರಮುಖ ಅಧಿಕಾರಿಗಳು ಭಾಗವಹಿಸಲಿದ್ದಾರೆ. ತಮ್ಮ ಭಾಷಣದಲ್ಲಿ ಉಡುಪಿ ಜಿಲ್ಲೆಗೆ ಸರ್ಕಾರ ನೀಡಿರುವ ಕೊಡುಗೆಗಳ ಪ್ರಸ್ತಾಪ ಮಾಡಲಿರುವ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ ಎಂದು ಊಹಿಸಲಾಗಿದೆ.ಉಡುಪಿ ಜಿಲ್ಲೆಗೆ ಸರ್ಕಾರ ನೀಡಿರುವ ಕೊಡುಗೆಗಳ ಪಟ್ಟಿ ಇಲ್ಲಿದೆ...ರಾಜ್ಯ ಸರ್ಕಾರದ ಮುಂಚೂಣಿ ಅನ್ನ ಭಾಗ್ಯ ಯೋಜನೆಯಿಂದ ಉಡುಪಿಯ ಬಡ ಕುಟುಂಬಗಳಿಗೆ 48527 ಕ್ವಿಂಟಾಲ್ ಧಾನ್ಯಗಳನ್ನು ಪೂರೈಸಲಾಗುತ್ತಿದ್ದು ಈ ವರೆಗೂ 5,46,121 ಜನರು ಇದರಿಂದ ಫಲಾನುಭವಿಗಳಾಗಿದ್ದಾರೆ. ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಉಡುಪಿ ಜಿಲ್ಲೆಗೆ 450 ಲಕ್ಷ ರೂಪಾಯಿ ಅನುದಾನವನ್ನು ನೀಡಲಾಗಿದ್ದು ಕೃಷಿ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನವನ್ನು ನೀಡಲಾಗಿದ್ದು ಸಾವಯವ ಭಾಗ್ಯದ ಅಡಿಯಲ್ಲಿ ಕಳೆದ 4 ವರ್ಷಗಳಲ್ಲಿ 205.63 ಲಕ್ಷ ಅನುದಾನವನ್ನು ನೀಡಲಾಗಿದೆ.

Recommended