ಕುಮಾರಣ್ಣನ ಹೇಳಿಕೆಗೆ ಆಕ್ರೋಶ..!

  • 6 years ago
ಮದ್ದೂರಿನ ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ ಅವರ ಹತ್ಯೆ ಪ್ರಕರಣದಲ್ಲಿ ಹಂತಕರನ್ನು ಮುಲಾಜಿಲ್ಲದೆ ಗುಂಡಿಕ್ಕಿ ಕೊಂದು ಹಾಕುವಂತೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಹುದ್ದೆಯ ಜವಾಬ್ದಾರಿಯುತ ಸ್ಥಾನದಲ್ಲಿದ್ದು ಹೀಗೆ ಆವೇಶದಿಂದ ಮಾತನಾಡುವುದು ಸರಿಯಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

Category

🗞
News

Recommended