ಮಂಡ್ಯದಲ್ಲಿ ಸುಮಲತಾ ಸ್ಪರ್ಧಿಸಿದರೆ, ದರ್ಶನ್ ಪ್ರಚಾರದ 'ಸಾರಥಿ'..! | FILMIBEAT KANNADA

  • 5 years ago
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಯಾವ ಪಕ್ಷದಿಂದ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ದಿನೇ ದಿನೇ ಹೆಚ್ಚಾಗುತ್ತಿದೆ. ಜೆಡಿಎಸ್ ಪ್ರಾಬಲ್ಯ ಹೊಂದಿರುವ ಜಿಲ್ಲೆಯಲ್ಲಿ ಈಗ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದ್ದು, ಅನಿವಾರ್ಯವಾಗಿ ಜೆಡಿಎಸ್ ಕಣದಿಂದ ಹಿಂದೆ ಸರಿಯುವ ಪರಿಸ್ಥಿತಿ ಉಂಟಾಗಿದೆ. ದಿವಂಗತ ಅಂಬರೀಷ್ ಅವರ ಪತ್ನಿ ಸುಮಲತಾ ಅವರು 'ಚುನಾವಣೆಗೆ ಸ್ಪರ್ಧಿಸಿದರೆ ಅದು ಮಂಡ್ಯದಿಂದ ಮಾತ್ರ' ಎಂದು ಹೇಳಿದ ಬಳಿಕ ಚಟುವಟಿಕೆಗಳು ಹೆಚ್ಚಾಗಿವೆ.

LS Elections 2019: Actor Darshan Thoogudeepa has sadi he is ready to campaign for actress Sumalatha Ambareesh if she contests Lok sabha elections in Mandya.