ಒಂದೇ ದಿನ 11 ಝಡ್ಎಸ್ ಎಲೆಕ್ಟ್ರಿಕ್ ಕಾರುಗಳನ್ನು ವಿತರಿಸಿದ ಎಂಜಿ ಮೋಟಾರ್

  • 4 years ago
ದೇಶಾದ್ಯಂತ ಎಲೆಕ್ಟ್ರಿಕ್ ಕಾರುಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಮಾರುಕಟ್ಟೆಯಲ್ಲಿರುವ ಹೆಚ್ಚು ಮೈಲೇಜ್ ನೀಡುವ ಕಾರುಗಳಲ್ಲಿ ಒಂದಾದ ಎಂಜಿ ಮೋಟಾರ್ ಕಂಪನಿಯ ಝಡ್ಎಸ್ ಎಲೆಕ್ಟ್ರಿಕ್ ಕಾರು ಸಹ ಹೆಚ್ಚಿನ ಬೇಡಿಕೆಯನ್ನು ಪಡೆಯುತ್ತಿದೆ.

2020ರ ಆಟೋ ಎಕ್ಸ್‌ಪೋ ನಂತರ ಝಡ್ಎಸ್ ಎಲೆಕ್ಟ್ರಿಕ್ ಕಾರಿನ ವಿತರಣೆಯನ್ನು ಆರಂಭಿಸಿರುವ ಎಂಜಿ ಮೋಟಾರ್ ಕಂಪನಿಯು ಇದುವರೆಗೆ ಸುಮಾರು 4 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಪಡೆದಿದ್ದು, ಉತ್ಪಾದನೆ ಹಾಗೂ ಬೇಡಿಕೆಗೆ ಅನುಸಾರವಾಗಿ ಕಾರು ವಿತರಣೆಯನ್ನು ಆರಂಭಿಸಿದೆ.

ಇತ್ತೀಚಿಗೆ ಕೇರಳದ ಕೊಚ್ಚಿನ್‌ನಲ್ಲಿ ಒಂದೇ ದಿನ 11 ಹೊಸ ಝಡ್ಎಸ್ ಎಲೆಕ್ಟ್ರಿಕ್ ಕಾರುಗಳನ್ನು ವಿತರಿಸಲಾಗಿದೆ.