ಎಲ್ಲಾ ಕಾರುಗಳ ಬೆಲೆ ಏರಿಕೆ ಮಾಡಲಿರುವ ಮಾರುತಿ ಸುಜುಕಿ

  • 4 years ago
ಮಾರುತಿ ಸುಜುಕಿ ಕಂಪನಿಯು 2021 ಜನವರಿಯಿಂದ ತನ್ನ ಎಲ್ಲಾ ಕಾರುಗಳ ಬೆಲೆಯನ್ನು ಹೆಚ್ಚಿಸಲಿದೆ. ಮಾದರಿಗಳ ಆಧಾರದ ಮೇಲೆ ಬೆಲೆ ಏರಿಕೆಯಾಗಲಿದೆ. ಎಷ್ಟು ಪ್ರಮಾಣದಲ್ಲಿ ಬೆಲೆ ಏರಿಸಲಾಗುವುದು ಎಂಬ ಬಗ್ಗೆ ಕಂಪನಿಯು ಮಾಹಿತಿ ನೀಡಿಲ್ಲ.

ಹೆಚ್ಚುತ್ತಿರುವ ಇನ್ಪುಟ್ ವೆಚ್ಚವನ್ನು ಸರಿದೂಗಿಸಲು ಬೆಲೆ ಏರಿಸಲಾಗುತ್ತಿದೆ ಎಂದು ಕಂಪನಿ ಹೇಳಿದೆ. ಒಂದು ವರ್ಷದ ಅವಧಿಯಲ್ಲಿ ವಿವಿಧ ಇನ್ಪುಟ್ ಗಳಿಂದ ಆಗುತ್ತಿರುವ ಬೆಲೆ ಏರಿಕೆಯನ್ನು ಕಂಪನಿಯು ಗ್ರಾಹಕರ ಮೇಲೆ ಹೇರಲು ಮುಂದಾಗಿದೆ.

ಮಾರುತಿ ಸುಜುಕಿ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ಸರಣಿಯ ಕಾರುಗಳನ್ನು ಮಾರಾಟ ಮಾಡುತ್ತದೆ.